ಕರಾವಳಿ

ಉಡುಪಿ : ಮಾ. 9 ರಂದು ರಾಷ್ಟ್ರೀಯ ಲೋಕ್ ಅದಾಲತ್

0

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯದ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬAಧಿಸಿದ ಪ್ರಕರಣ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ ಪ್ರಕರಣ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಪ್ರಕರಣ ಹಾಗೂ ಪಿಂಚಣಿ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

Advertisement. Scroll to continue reading.

     ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.      

    ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ: 1800-425-90900, ವೆಬ್‌ಸೈಟ್ www.kslsa.kar.nic.in ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com