ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎಂದಿನಂತೆ ಖಾಸಗಿ ವಾಹಿನಿಗಳು ಸಮೀಕ್ಷೆ ನಡೆಸಿವೆ. ಈ ಬಾರಿಯೂ ‘ಮತ್ತೊಮ್ಮೆ ಮೋದಿ’ ಎಂಬ ಜೈಕಾರ ಜೋರಾಗಿಯೇ ಇದೆ.
ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಪ್ರಕಾರ ಇಂದು ಚುನಾವಣೆ ನಡೆದರೆ ಎನ್‌ಡಿಎ ಬಹುಮತ ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 335 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ, ಒಟ್ಟಾರೆಯಾಗಿ ಎನ್ಡಿಎ ಮೈತ್ರಿಕೂಟವು ಈ ಬಾರಿ 18 ಸ್ಥಾನಗಳನ್ನು ಕಳೆದುಕೊಳ್ಳಲಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಒಟ್ಟು 545 ಸ್ಥಾನಗಳ ಪೈಕಿ ಎನ್‌ಡಿಎ ಮೈತ್ರಿಕೂಟ 353 ಸ್ಥಾನಗಳನ್ನು ಗೆದ್ದಿತ್ತು. ಇನ್ನು ಬಿಜೆಪಿ ಮಾತ್ರ 303 ಸ್ಥಾನಗಳನ್ನು ಜಯಗಳಿಸಿತ್ತು. ಇನ್ನು ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಕರ್ನಾಟಕದಲ್ಲಿ 25 ಮತ್ತು ತೆಲಂಗಾಣದಲ್ಲಿ 4 ಸ್ಥಾನಗಳನ್ನು ಗೆದ್ದಿತ್ತು.
Advertisement. Scroll to continue reading.
ಪ್ರಧಾನಿ ಯಾರಾಗಬೇಕು?
ನರೇಂದ್ರ ಮೋದಿ – ಶೇ.52, ರಾಹುಲ್ ಗಾಂಧಿ – ಶೇ.16
ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ?
- ಬಿಜೆಪಿ+ ಜೆಡಿಎಸ್ – 24 ಸ್ಥಾನಗಳು (ಶೇ. 53 ಮತಗಳು)
- ಕಾಂಗ್ರೆಸ್ – 4 ಸ್ಥಾನಗಳು (ಶೇ.42ರಷ್ಟು ಮತಗಳು)
ಟೈಮ್ಸ್ ನೌ ಮತ್ತು ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ ಕ್ರಮವಾಗಿ ಬಿಜೆಪಿ 24 ಮತ್ತು 21 ಹಾಗೂ ಕಾಂಗ್ರೆಸ್ 4 ಮತ್ತು ಐದು ಸೀಟುಗಳನ್ನು ಗೆಲ್ಲಲಿದೆ.
ಇಂಡಿಯಾ ಟುಡೇ ಸಮೀಕ್ಷೆಯ ಪ್ರಕಾರ ಬಿಜೆಪಿ ಮತ್ತು ಜೆಡಿಎಸ್ ಶೇ.53ರಷ್ಟು ಮತ ಗಳಿಸಲಿದ್ದು, ಕಾಂಗ್ರೆಸ್ ಶೇ.42 ಮತ ಪಡೆಯಲಿದೆ.
ಟೈಮ್ಸ್ ನೌ ಸಮೀಕ್ಷೆಯ ಪ್ರಕಾರ ಬಿಜೆಪಿ ಮತ್ತು ಜೆಡಿಎಸ್ ಶೇ.54.6 ಹಾಗೂ ಕಾಂಗ್ರೆಸ್ ಶೇ.42.3ರಷ್ಟು ಮತಗಳನ್ನು ಪಡೆಯಲಿದೆ.
Advertisement. Scroll to continue reading.