ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ವಿಧಾನ್ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್ಎಸ್ಆರ್ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್ಲೈನ್ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.
Advertisement. Scroll to continue reading.
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡ್ತೀವಿ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದರು. ಅದರಂತೆ ಇಂದು ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇತ್ತು ಆದರೆ ದಿನಾಂಕ ಮುಂದೂಡುವಂತೆ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೂರು ತಿಂಗಳು ಮುಂದೂಡಲಾಗಿದೆ.
Advertisement. Scroll to continue reading.