ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಕರ್ನಾಟಕದ 7 ಲೋಕಸಭಾ ಕ್ಷೇತ್ರ ಸೇರಿದಂತೆ 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ , ನಿನ್ನೆ ಕಾಂಗ್ರ
ಇಂದು ಸಂಜೆ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ವಿವಿಧ ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
Advertisement. Scroll to continue reading.
ಕರ್ನಾಟಕದ 28 ಕ್ಷೇತ್ರಗಳ ಪೈಕಿ 7 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಶಿವಮೊಗ್ಗದಿಂದ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆ.
ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡಗಡೆ ಮಾಡಿದೆ.
ಕರ್ನಾಟಕ
Advertisement. Scroll to continue reading.
1. ತುಮಕೂರು – ಮುದ್ದಹನುಮೇಗೌಡ
2. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
3. ಹಾಸನ – ಶ್ರೇಯಸ್ ಪಟೇಲ್
4. ವಿಜಯಪುರ – ರಾಜು ಆಲಗೂರು
Advertisement. Scroll to continue reading.
5. ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು)
6. ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್
7. ಹಾವೇರಿ – ಆನಂದ್ ಸ್ವಾಮಿ ಗಡ್ಡದೇವರಮಠ
Advertisement. Scroll to continue reading.