ಕ್ರೀಡೆ

ಅಲ್ಪ ಮೊತ್ತ ಗಳಿಸಿದರೂ ಎರಡು ದಾಖಲೆ ನಿರ್ಮಿಸಿದ ಕೊಹ್ಲಿ

0

ಚೆನ್ನೈ: ಮೂರೂ ಸ್ವರೂಪದ ಕ್ರಿಕೆಟ್‌ನಲ್ಲಿ ರನ್‌ ಹೊಳೆ ಹರಿಸಿ ಈಗಾಗಲೇ ಹಲವು ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ, ಇದೀಗ ಟಿ20 ಕ್ರಿಕೆಟ್‌ನಲ್ಲಿ ಎರಡು ವಿಶೇಷ ದಾಖಲೆಗಳನ್ನು ಬರೆದಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ದ 1000 ರನ್‌ಗಳನ್ನು ಪೂರ್ಣಗೊಳಿಸಿದ ಕೊಹ್ಲಿ, ಟಿ20 ಕ್ರಿಕೆಟ್‌ನಲ್ಲಿ 12000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಶುಕ್ರವಾರ ಇಲ್ಲಿನ ಎಂಎ ಚಿದಂಬರಂ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭವಾದ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್ ಆರಂಭಿಕ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಪರ ವಿರಾಟ್‌ ಕೊಹ್ಲಿ 20 ಎಸೆತಗಳಲ್ಲಿ 21 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 12000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್‌ ಎಂಬ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದವರ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 12000 ರನ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್‌ ಆಗಿದ್ದಾರೆ.

ವಿರಾಟ್ ಕೊಹ್ಲಿಗೂ ಮುನ್ನ ಐದು ಮಂದಿ ಬ್ಯಾಟ್ಸ್‌ಮನ್‌ಗಳು ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ವಿಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್, ಪಾಕಿಸ್ತಾನದ ಶೋಯಬ್‌ ಮಲಿಕ್‌, ಕೈರೊನ್‌ ಪೊಲಾರ್ಡ್‌, ಅಲೆಕ್ಸ್‌ ಹೇಲ್ಸ್‌ ಹಾಗೂ ಡೇವಿಡ್‌ ವಾರ್ನರ್ ಅವರು ಈ ದಾಖಲೆಯ ಪಟ್ಟಿಯಲ್ಲಿದ್ದಾರೆ. 12 ಸಾವಿರ ಟಿ20 ರನ್‌ಗಳನ್ನು ವೇಗವಾಗಿ ಪೂರ್ಣಗೊಳಿಸಿದ ಮೂರನೇ ಬ್ಯಾಟ್ಸ್‌ಮನ್‌ ಕೊಹ್ಲ. ಇವರು 377ನೇ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಕ್ರಿಸ್‌ ಗೇಲ್ 352 ಪಂದ್ಯಗಳಲ್ಲಿ 12000 ರನ್‌ಗಳನ್ನು ಪೂರ್ಣಗೊಳಿಸಿದ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com