ರಾಷ್ಟ್ರೀಯ

ವಿರೋಧಿಗಳೇ ಇಲ್ಲ: ಅರುಣಾಚಲ ಪ್ರದೇಶ ಸಿಎಂ ಸೇರಿ 5 ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

0

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಆಯೋಗ ಇನ್ನೂ ಅಧಿಕೃತವಾಗಿ ಐವರು ವಿಜಯಿ ಆಗಿದ್ದಾರೆ ಎಂದು ಘೋಷಣೆ ಮಾಡಿಲ್ಲ. ಹಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ದುರ್ಬಲಗೊಂಡಿದ್ದು ಈ ಬಾರಿ ಆಡಳಿತ ಸರ್ಕಾರ ಕ್ಲೀನ್‌ ಸ್ವೀಪ್‌ ಮಾಡುವ ಸಾಧ್ಯತೆಯಿದೆ. 

Advertisement. Scroll to continue reading.

ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com