ಮಂಡ್ಯ : ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅವಳಿ ಮಕ್ಕಳು ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿವೆ ಎಂಬ ಪ್ರಕರಣ ಬುಧವಾರ ನಡೆದಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಕಾರಣ ಏನು?
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಯ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.
Advertisement. Scroll to continue reading.
ಪೊಲೀಸ್ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.
ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ವಿಷ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು.
ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.
ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಂಪತ್ಯ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಮನೆಯಲ್ಲಿ ದಂಪತಿ ಜಗಳ ವಿಕೋಪಕ್ಕೆ ತಿರುಗಿದ್ದು, ಜಗಳದಿಂದ ಬೇಸತ್ತು ನಿನ್ನೆ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾರೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು. ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ಮುಂದುವರಿದೆ.
Advertisement. Scroll to continue reading.