ಕ್ರೀಡೆ

ಸೋತ ಬಳಿಕ ಮೈದಾನದಲ್ಲೇ ಜಗಳವಾಡಿದ್ರಾ ಲಕ್ನೋ ಮಾಲೀಕ ಮತ್ತು ಕೆಎಲ್ ರಾಹುಲ್?

0

ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾದರೂ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಮನಿಸಿರುವ ನೆಟ್ಟಿಗರು ಇವರಿಬ್ಬರು ಜಗಳ ಆಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಬುಧವಾರ ಹೈದರಾಬಾದಿನ ರಾಜಿವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ಬೌಲರ್ ಗಳನ್ನು ಮನಬಂದಂತೆ ದಂಡಿಸಿದ ಎಸ್ ಆರ್ ಹೆಚ್ ಕೇವಲ 9.4 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 167 ರನ್ ಚಚ್ಚಿ ಗೆದ್ದು ಬೀಗಿತು. ಈ ಗೆಲುವು ಪ್ಯಾಟ್ ಕಮ್ಮಿನ್ಸ್ ಪಡೆಗೆ ದೊಡ್ಡ ಪ್ಲಸ್ ಪಾಯಿಂಟ್ ಆದರೆ, ಇತ್ತ ರಾಹುಲ್ ಪಡೆಯ ಪ್ಲೇ ಆಫ್ ಕನಸು ಮತ್ತಷ್ಟು ದೂರವಾಯಿತು. ಈ ಆಘಾತದ ನಡುವೆ ಪಂದ್ಯ ಮುಗಿದ ಬಳಿಕ ವಿಶೇಷ ಘಟನೆಯೊಂದು ನಡೆದಿದೆ.

ಈ ಜಯದೊಂದಿಗೆ ಎಸ್ ಆರ್ ಹೆಚ್ ಆಡಿದ 12 ಪಂದ್ಯಗಲ್ಲಿ ಏಳು ಜಯ ಮತ್ತು ಐದರಲ್ಲಿ ಸೋಲು ಕಂಡು 14 ಅಂಕ ಸಂಪಾದಿಸಿ ಮೂರನೇ ಸ್ಥಾನಕ್ಕೆ ಜಿಗಿದಿದೆ.

Advertisement. Scroll to continue reading.

ಇತ್ತ ಲಕ್ನೋ ಸೂಪರ್ ಜೇಂಟ್ಸ್ ತಂಡ ಆಡಿರುವ 12 ಪಂದ್ಯಗಳಲ್ಲಿ ಕೇವಲ 12 ಅಂಕಗಳೊಂದಿಗೆ ಟೇಬಲ್‌ನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಪ್ಲೇ ಆಫ್​ಗೆ ಅರ್ಹತೆ ಪಡೆಯಲು ಅವರ ಎರಡೂ ಪಂದ್ಯಗಳಲ್ಲಿ ಗೆಲ್ಲಲೇ ಬೇಕಾದ ಅಗತ್ಯವಿದೆ, ಅಲ್ಲದೆ ಇವರ ನಿವ್ವಳ ರನ್ ರೇಟ್ (NRR) ಮೈನಸ್​ನಲ್ಲಿದೆ. ಎಲ್​ಎಸ್​ಜಿ ಇದುವರೆಗೆ ಆಡಿದ ಎರಡೂ ಋತುಗಳಲ್ಲಿ ಪ್ಲೇಆಫ್‌ಗಳನ್ನು ತಲುಪಿದೆ, 2022 ಮತ್ತು 2023 ರಲ್ಲಿ ಎಲಿಮಿನೇಟರ್​ನಲ್ಲಿ ಸೋಲು ಕಂಡಿತ್ತು

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com