ವಾಷಿಂಗ್ಟನ್: ಆಸ್ಪತ್ರೆ ಬಿಲ್ ಕಟ್ಟಲು ಹಣವಿಲ್ಲ ಎಂದು ಕಾಯಿಲೆ ಬಿದ್ದು ಆಸ್ಪತ್ರೆ ಸೇರಿದ್ದ ಹೆಂಡತಿ ಕತ್ತು ಹಿಸುಕಿ ಪತಿ ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ರೋನಿ ವಿಗ್ಸ್ ಎಂಬಾತ ಪತ್ನಿಗೆ ಚಿಕಿತ್ಸೆ ಕೊಡಿಸಿದ್ದಕ್ಕೆ ವೈದ್ಯಕೀಯ ಬಿಲ್ಗಳನ್ನು ಭರಿಸಲು ಸಾಧ್ಯವಿಲ್ಲವೆಂದು ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಮಿಸೌರಿಯ ಇಂಡಿಪೆಂಡೆನ್ಸ್ನಲ್ಲಿರುವ ಸೆಂಟರ್ಪಾಯಿಂಟ್ ಮೆಡಿಕಲ್ ಸೆಂಟರ್ನಲ್ಲಿ ಈ ಘಟನೆ ಸಂಭವಿಸಿದೆ.
ಐಸಿಯುನಲ್ಲಿದ್ದ ರೋಗಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿದ್ದಾರೆ. ರೋಗಿ ತನ್ನ ಹಾಸಿಗೆಯಲ್ಲಿ ಮಲಗಿದ್ದಾಗ, ಮೊದಲು ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪತಿ ಮುಂದಾಗಿದ್ದ.
Advertisement. Scroll to continue reading.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ರೋಗಿ ಮೃತಪಟ್ಟಿರುವುದು ಗೊತ್ತಾಗಿದೆ. ನನ್ನ ಪತ್ನಿಯನ್ನು ನಾನೇ ಕೊಂದೆ ಎಂದು ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದೆ. ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲು ಹಣವಿರಲಿಲ್ಲ. ಹೀಗಾಗಿ ಈ ಕೃತ್ಯ ಎಸಗಿದೆ ಎಂದು ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.
Advertisement. Scroll to continue reading.