ರಾಷ್ಟ್ರೀಯ

ಮುಂಬೈಯಲ್ಲಿ ಹೋರ್ಡಿಂಗ್ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ, 88 ಮಂದಿಯ ರಕ್ಷಣೆ

0

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ಸೋಮವಾರ ಮುಂಬೈಯಲ್ಲಿ ಸಾಯಂಕಾಲ ಹೊತ್ತಿನಲ್ಲಿ ಭಾರೀ ಧೂಳು ಬಿರುಗಾಳಿ ಮತ್ತು ಅಕಾಲಿಕ ಮಳೆ ಸುರಿಯಿತು. ಈ ಸಂದರ್ಭದಲ್ಲಿ ಭಾರೀ ಗಾಳಿಗೆ ಘಾಟ್‌ಕೋಪರ್‌ನ ಪೆಟ್ರೋಲ್ ಪಂಪ್‌ನಲ್ಲಿ 100 ಅಡಿ ಎತ್ತರದ ಅಕ್ರಮವಾಗಿ ಅಳವಡಿಸಿದ್ದ ಜಾಹೀರಾತು ಫಲಕ ಕೆಳಗೆ ಬಿದ್ದಿದೆ.

ಛೇಡಾ ನಗರ ಮೂಲದ ಪೆಟ್ರೋಲ್ ಪಂಪ್‌ನಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಹೇಳುತ್ತಿದ್ದಾರೆ.

Advertisement. Scroll to continue reading.

ಮೃತರ ಸಂಖ್ಯೆ 12 ಕ್ಕೆ ಏರಿದೆ, ಗಾಯಗೊಂಡವರ ಸಂಖ್ಯೆ 74ಕ್ಕೆ ಏರಿದ್ದು, ಗಾಯಗೊಂಡವರಲ್ಲಿ 31 ಜನರನ್ನು ರಾಜವಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು 35 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನೂ ಎಂಟು ಗಾಯಾಳುಗಳು ಮೂರು ಖಾಸಗಿ ಮತ್ತು ಮುಂಬೈ ಮಹಾನಗರ ಪಾಲಿಕೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಪ್ರಾಥಮಿಕ ಅಂದಾಜಿನ ಪ್ರಕಾರ ಪಂತ್‌ನಗರದ ಪೂರ್ವ ಎಕ್ಸ್‌ಪ್ರೆಸ್ ಹೆದ್ದಾರಿಯುದ್ದಕ್ಕೂ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ 100 ಕ್ಕೂ ಹೆಚ್ಚು ವ್ಯಕ್ತಿಗಳು ಅವಶೇಷಗಳಲ್ಲಿ ಸಿಕ್ಕಿಬಿದ್ದಿದ್ದಾರೆ.

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುವುದು ಮತ್ತು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳನ್ನು ತಡೆಯಲು ಮಹಾನಗರ ಮುಂಬೈಯಲ್ಲಿರುವ ಜಾಹೀರಾತು ಫಲಕಗಳ ಲೆಕ್ಕಪರಿಶೋಧನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com