ರಾಜ್ಯ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ, ಜೂನ್​ 2ರಿಂದ ಮಳೆ ಜೋರು

0

ಬೆಂಗಳೂರು: ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು ಜೂನ್ 2ರಿಂದ ರಾಜ್ಯದೆಲ್ಲೆಡೆ ಜೋಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಶುರುವಾಗಲಿದೆ. ಮಂಗಳೂರು, ಧರ್ಮಸ್ಥಳ, ಪಣಂಬೂರು, ಮಾಣಿ, ಪುತ್ತೂರು, ಉಡುಪಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com