ಜಮ್ಮು: ಭಾರತ – ಪಾಕ್ ನಡುವೆ ಉದ್ವಿಗ್ನ ವಾತಾವರಣ ಉಂಟಾಗಿದ್ದು,ದಾಳಿ ಪ್ರತಿ ದಾಳಿ ನಡೆಯುತ್ತಿದೆ. ಪಾಕಿಸ್ತಾನ ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ.
ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ. ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದು, ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಆಕಾಶದಲ್ಲೇ ಹೊಡೆದುರುಳಿಸಿದೆ.
ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್ಎಸ್ ಪುರ, ಅರ್ನಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕಡೆಗೆ ಪಾಕಿಸ್ತಾನದಿಂದ ಎಂಟು ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ವರದಿಯಾಗಿದ್ದು, ಇದನ್ನು ಭಾರತೀಯ ಸೇನೆ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.