ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್ಐಆರ್ ದಾಖಲಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ, “ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ?” ಎಂದು ಪೋಸ್ಟ್ ಮಾಡಿದ್ದರು.
Advertisement. Scroll to continue reading.
ಈ ಪೋಸ್ಟ್ ವಿರುದ್ಧ ಶ್ವೇತಾ ಪೂಜಾರಿ ಮೇಲೆ ಎಫ್ಐಆರ್ ದಾಖಲಾಗಿದೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.