ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ, ಮೂಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂ. 16 ರಂದು ರಜೆ ಘೋಷಿಸಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.