ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜು : ವಾರ್ಷಿಕ ಕ್ರೀಡಾಕೂಟ
Published
1
ಶಿರ್ವ : ಡಾನ್ ಬೋಸ್ಕ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು.
ಮಾಹೆ ಮಣಿಪಾಲ್ ನ ಸಹಾಯಕ ಪ್ರಾಧ್ಯಾಪಕ ಡಾ.ರೆನ್ ಟ್ರವೆರೋ ಡಯಾಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು. ಮುಖ್ಯ ಅತಿಥಿ ಸಂಸ್ಥೆಯ ಸಂಚಾಲಕ ವೆರಿ ರೆವೆರೆಂಡ್ ಫಾದರ್ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ವಿದ್ಯಾರ್ಥಿಗಳ ಶಿಸ್ತನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ಆರಾನ್ಹ, ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೋಹನ್ ಚಾರ್ಲ್ಸ್ ನರೋನ್ಹ, ಪ್ರಾಂಶುಪಾಲ ಜಯಶಂಕರ್ ಕೆ., ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸಬೀನ ಪ್ರಿಯ ನೋರೊನ್ಹ, ಡಾನ್ ಬೋಸ್ಕೊ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕಿ ಸಂಧ್ಯಾ ಮೆಂಡೋನ್ಸ ದೈಹಿಕ ಶಿಕ್ಷಕರಾದ ಜೋಸೆಫ್ ಡಿಸೋಜ, ವಿಲಿಯಮ್ ವೇಗಸ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಜಯಶಂಕರ್ ಕೆ ಸ್ವಾಗತಿಸಿದರು. ದೈಹಿಕ ಶಿಕ್ಷಕ ಜೋಸೆಫ್ ಡಿಸೋಜ ವಂದಿಸಿ, ಉಪನ್ಯಾಸಕಿ ಗ್ಲೆನಿಷಾ ರೇಷ್ಮಾ ಮೆಂಡೋನ್ಸ ಕಾರ್ಯಕ್ರಮ ನಿರೂಪಿಸಿದರು.