ಉಡುಪಿ : ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ ಭಾನುವಾರ ಮತ್ತೊಂದು ದಾಖಲೆ ಬರೆದಿದ್ದಾರೆ. ಕಕ್ಕೆಪದವುನಲ್ಲಿ ನಡೆದ ಕಂಬಳದಲ್ಲಿ 8.78 ಸೆಂಕೆಂಡ್ಸ್ ನಲ್ಲಿ 100 ಮೀಟರ್ ಕ್ರಮಿಸಿ ದಾಖಲೆ ಬರೆದಿದ್ದಾರೆ.
ಕಳೆದ ವಾರವಷ್ಟೇ ವೇಣೂರಿನಲ್ಲಿ ನಡೆದ ಕಂಬಳದಲ್ಲಿ 8.89 ಸೆಕೆಂಡ್ ಗಳಲ್ಲಿ 100 ಮೀಟರ್ ಕ್ರಮಿಸಿ ದಾಖಲೆ ಬರೆದಿದ್ದರು. ಇದೀಗ ನಿನ್ನೆ ತಮ್ಮ ದಾಖಲೆಯನ್ನು ತಾವೇ ಮುರಿದು ಹೊಸ ದಾಖಲೆ ಬರೆದಿದ್ದಾರೆ.ಎರಡು ದಿನಗಳ ಕಾಲ ನಡೆದ ಕಕ್ಕೆಪದವು ಜೋಡುಕರೆ ಕಂಬಳದ ಒಂದೇ ಸ್ಪರ್ಧೆಯಲ್ಲಿ ಶ್ರೀನಿವಾಸ್ ಗೌಡ 6 ಪದಕಗಳನ್ನು ಪಡೆದು ಮತ್ತೊಂದು ಸಾಧನೆ ಮಾಡಿದ್ದಾರೆ.
ಮಿಜಾರು ಪ್ರಸಾಧ್ ನಿಲಯದ ಶಕ್ತಿಪ್ರಸಾದ್ ಮಾಳಿಕತ್ದ ಕೋಣಗಳನ್ನು ಓಡಿಸಿದ ಶ್ರೀನಿವಾಸಗೌಡ ಈ ದಾಖಲೆ ಬರೆದಿದ್ದಾರೆ. ಈ ಬಾರಿಯ ಕಂಬಳದಲ್ಲಿ ಒಟ್ಟು 18 ಪದಕಗಳನ್ನು ಗಳಿಸಿ ಸಾಧನೆ ಮೆರೆದಿದ್ದಾರೆ.