ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ “ಜ್ಞಾನ ಜ್ಯೋತಿ”ಹೊಸ ದಿನದ ವಿದ್ಯಾ ದೀವಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಉದಯ್ ಅಮೀನ್ ಮಟ್ಟು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಜಗದೀಶ್ ಕುಮಾರ್ ವಹಿಸಿದ್ದರು.
ಸಂಪನ್ಮೂಲ ಪ್ರಾಜ್ಞರಾಗಿ ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೆಸಿ ರಾಜೇಂದ್ರ ಭಟ್ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಘಟಕದ ಪೂರ್ವಧ್ಯಕ್ಷರುಗಳಾದ ಶ್ರೀ ರವಿರಾಜ್ ಕುಮಾರ್, ಕಿರಣ್ ಕುಮಾರ್, ಕಾರ್ಯದರ್ಶಿ ಮಾಲತಿ ಅಮೀನ್, ವಿದ್ಯಾರ್ಥಿ ಸಂಘಟನಾ ನಿರ್ದೇಶಕ ಪ್ರಕಾಶ್ ಚಂದ್ರ ಉಪಸ್ಥಿತರಿದ್ದರು. ವೀಕ್ಷಿತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ವರದಿ : ವೀಕ್ಷಿತ್ ಪೂಜಾರಿ
Advertisement. Scroll to continue reading.