ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೊರೋನಾ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಅವರ ಸಂಪರ್ಕಕ್ಕೆ ಬಂದಿರುವವರನ್ನು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿಯವರು ಕೆಲವು ದಿನಗಳ ಹಿಂದೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರವನ್ನು ಕೈಗೊಂಡಿದ್ದರು. ಇಂದು ಅವರಿಗ ಕೋವಿಡ್ ಸೋಂಕು ದೃಢಪಟ್ಟಿದೆ. ಶುಕ್ರವಾರವಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಕೋವಿ ಸೋಂಕು ದೃಢಪಟ್ಟಿತ್ತು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement. Scroll to continue reading.