ಉಡುಪಿ : ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಿಸಲಾಗಿದೆ. ಬುಧವಾರ ಸೋದೆ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿ ಘೊಷಣೆ ಮಾಡಲಾಗಿದೆ. 16 ವರ್ಷದ ವಟು ಅನಿರುದ್ಧ್ ಸರಳತ್ತಾಯ ನೂತನ ಉತ್ತರಾಧಿಕಾರಿಯಾಗಿದ್ದಾರೆ. ಮೇ 11 ರಿಂದ 14 ರ ವರೆಗೆ ಪಟ್ಟಾಭಿಷೇಕ ಪ್ರಕ್ರಿಯೆ ಉತ್ತ ರ ಕನ್ನಡ ಜಿಲ್ಲೆಯ ಸೋಂದಾ ಮಠದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಟು:
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನಿಡ್ಲೆ ಮೂಲದ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ವಟು ಅನಿರುದ್ಧ ಸರಳತ್ತಾಯ. ಉಡುಪಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ್ದಾರೆ.
Advertisement. Scroll to continue reading.
ಜುಲೈ 19,2018ರಂದು ಸಂಶಯಾಸ್ಪದ ರೀತಿಯಲ್ಲಿ ಶಿರೂರು ಮಠದ ಸ್ವಾಮೀಜಿ ಲಕ್ಷ್ಮೀವರತೀರ್ಥ ಸ್ವಾಮೀಜಿ ನಿಧನರಾಗಿದ್ದರು. ಆ ಬಳಿಕ ಸೋದೆ ಮಠ ಮಠದ ವ್ಯವಹಾರ, ಆಸ್ತಿ ಪಾಸ್ತಿ, ತೆರಿಗೆ ನಿರ್ವಹಣೆ ನೋಡಿಕೊಳ್ಳುತ್ತಿದೆ.