ನವದೆಹಲಿ : ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ ವರದಿಯಾಗಿತ್ತು. ಇಂತಹ ವರದಿಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಏಮ್ಸ್ ಆಸ್ಪತ್ರೆ ಅಧಿಕಾರಿಗಳು, ಛೋಟಾ ರಾಜನ್ ಇನ್ನೂ ಜೀವಂತವಾಗಿದ್ದಾರೆ. ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ.
ಕೊರೋನಾ ಸೋಂಕಿನಿಂದಾಗಿ ಏಪ್ರಿಲ್ 26 ರಂದು 62 ವರ್ಷದ ಛೋಟಾ ರಾಜನ್ ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement. Scroll to continue reading.