ಬೆಂಗಳೂರು : ರಾಜ್ಯದಲ್ಲಿ ಮೇ 22 ರ ವರೆಗೂ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಮತ್ತೆ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಮಂಡ್ಯ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ದಾವಣಗೆರೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತೌಕ್ತೆ ಅಬ್ಬರ
ಈಗಾಗಲೇ ತೌಕ್ತೆ ಅಬ್ಬರದಿಂದಾಗಿ ಕರಾವಳಿ ಹಾಗೂ ಮಲೆನಾಡು ಅಕ್ಷರಶಃ ನಲುಗಿದೆ. ಗಾಳಿ ಮತ್ತು ಮಳೆಯಿಂದಾಗಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವು ಮನೆಗಳಿಗೆ ಹಾನಿಯಾಗಿದೆ.
Advertisement. Scroll to continue reading.