ವರದಿ : ಶಫೀ ಉಚ್ಚಿಲ
ಕಾಪು : ಪಡುಬಿದ್ರಿ ಠಾಣೆಯ ಎಸ್ಸೈ ಸಹಿತ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು,ಠಾಣೆಯನ್ನು ಪಕ್ಕದ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.
ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ
ಎಸ್ಸೈ ದಿಲೀಪ್ ಸಹಿತ 10 ಪೊಲೀಸರಿಗೆ ಕೊರೊನಾ ಅಂಟಿಕೊಂಡಿದ್ದು,ಸದ್ಯ ಅವರೆಲ್ಲರೂ ಕ್ವಾರಂಟೈನ್ನಲ್ಲಿದ್ದಾರೆ.ಈ ಹಿನ್ನೆಲೆ ಪಡುಬಿದ್ರಿ ಪೊಲೀಸ್ ಠಾಣೆಯನ್ನು 24 ಗಂಟೆಗಳ ಕಾಲ ಸೀಲ್ಡೌನ್ ಮಾಡಿ ಠಾಣೆಯನ್ನು ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.
Advertisement. Scroll to continue reading.
ಕೆಲವು ದಿನಗಳ ಹಿಂದೆ ಸಿಬ್ಬಂದಿಯೊಬ್ಬರಿಗೆ ಜ್ವರ ಬಂದ ಹಿನ್ನೆಲೆ ಕೊವಿಡ್ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿತ್ತು.ಬಳಿಕ ಠಾಣೆಯ ಎಲ್ಲರಿಗೂ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು,ಈ ಸಂದರ್ಭ ಎಸ್ಸೈ ಸಹಿತ 10 ಪೊಲೀಸರಿಗೆ ಕೊರೊನಾ ದೃಡಪಟ್ಟಿರುವುದಾಗಿ ತಿಳಿದು ಬಂದಿದೆ.