ಬೆಂಗಳೂರು : ಕೊರೋನಾ ಸೋಂಕು ಹೆಚ್ಚಾಗುತ್ತಿದ್ದಂತೆ ಶಾಲಾ ಕಾಲೇಜುಗಳ ಬಾಗಿಲು ಮುಚ್ಚಿವೆ. ಆನ್ ಲೈನ್ ಮೂಲಕ ತರಗತಿಗಳು ನಡೆಯುತ್ತಿವೆ. ಆದರೆ, ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ಇಲ್ಲವೆಂಬುದು ಪೋಷಕರ ನೋವು. ಕೊರೋನಾದಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಇನ್ನು ಕೆಲವರಿಗೆ ಅರ್ಧ ಸಂಬಳ, ಕೆಲವರಿಗೆ ರಜೆ ಸಿಕ್ಕಿದೆ. ಹೀಗಾಗಿ ಪೋಷಕರು ಮಕ್ಕಳ ಫೀಸ್ ಕಟ್ಟುವಲ್ಲಿ ಸಂಕಷ್ಟ ಎದುರಿಸುವಂತಾಗಿದೆ.
ಇದೀಗ ಪೋಷಕರ ಪರವಾಗಿ ನಟ ಕಿರಣ್ ರಾಜ್ ದನಿ ಎತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
ಜಗತ್ತಿನೆಲ್ಲೆಡೆ ಕೋವಿಡ್ – 19 ವ್ಯಾಪಕವಾಗಿ ಹರಡುತ್ತಿದ್ದು, ಸಾಮಾನ್ಯ ಜನರ ಬದುಕು ಅಲ್ಲೋಲಕಲ್ಲೋಲವಾಗಿದೆ. ಇನ್ನು ಮಕ್ಕಳು ಶಾಲಾ-ಕಾಲೇಜು ಇಲ್ಲದೆ ಆನ್ ಲೈನ್ ಶಿಕ್ಷಣಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ, ಶಾಲಾ ಕಾಲೇಜುಗಳ ಶುಲ್ಕವೂ ಸ್ವಲ್ಪವೂ ಕುಗ್ಗಿಲ್ಲ. ದಯವಿಟ್ಟು ಶಾಲಾ-ಕಾಲೇಜುಗಳ ಶುಲ್ಕದಲ್ಲಿ ರಿಯಾಯಿತಿ ಕೊಡಿಸಬೇಕೆಂದು ಈ ಮೂಲಕ ನಿಮ್ಮಲ್ಲಿ, ಎಲ್ಲಾ ಪೋಷಕರ ಪರವಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.
ನಮ್ಮ ಈ ವಿನಂತಿಯನ್ನು ನೀವು ಪರಿಗಳಿಸಿ, ಪರಿಶೀಲಿಸಿ ಜನರ ಬೆನ್ನೆಲುಬಾಗಿ ನಿಲ್ಲುವಿರೆಂಬ ವಿಶ್ವಾಸವಿದೆ ಎಂದು ಬರೆದಿದ್ದಾರೆ.
ಈಗಾಗಲೇ ತಮ್ಮ ಕಿರಣ್ ರಾಜ್ ಫೌಂಡೇಷನ್ ಮೂಲಕ ಕಿರಣ್ ರಾಜ್ ಹಸಿದವರಿಗೆ ಸಹಾಯ ಮಾಡುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೇವಲ ಕಿರುತೆರೆ ನಟನಾಗಿ ಉಳಿಯದೆ `ರಿಯಲ್ ಹೀರೋ’ ಎಂದೆನಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಮಹತ್ಕಾರ್ಯ ಮಾಡುವ ಮೆಚ್ಚುಗೆ ಪಡೆದಿದ್ದಾರೆ.
Advertisement. Scroll to continue reading.