ವರದಿ: ಶಫೀ ಉಚ್ಚಿಲ
ಕಾಪು : ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ವೃತ್ತ ನಿರೀಕ್ಷಕರಾದ ಪ್ರಕಾಶ್ ಇವರ ಉಪಸ್ಥಿತಿಯಲ್ಲಿ ಗುರುವಾರ ‘ಭಯೋತ್ಪಾದನಾ ವಿರೋಧಿ’ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.
ಪ್ರತಿಜ್ಞಾ ವಿಧಿ ಬೋಧಿಸಿದ ವೃತ್ತ ನಿರೀಕ್ಷಕ ಪ್ರಕಾಶ್, ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸಬೇಕೆಂದು ಕರೆ ನೀಡಿದರು.
Advertisement. Scroll to continue reading.
ನಮ್ಮ ಸಹ ಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಅವರು ಪ್ರತಿಜ್ಞೆಯನ್ನು ಬೋಧಿಸಿದರು.