ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಜೂನ್ 30 ರ ವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಹಿಂದೆ ಮೇ 31 ರ ವರೆಗೆ ನಿರ್ಬಂಧ ಹೇರಲಾಗಿತ್ತು. ಭಾರತದಿಂದ ಹೊರಡುವ ಹಾಗೂ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ ಇರುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದ್ದ, ಕಾರ್ಗೋ ವಿಮಾನಗಳಿಗೆ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅನುಮತಿ ಪಡೆದ ನಿರ್ದಿಷ್ಟ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ಅನಿವಾರ್ಯ ಸಂದರ್ಭಗಲಲ್ಲಿ ಆಯ್ದ ದೇಶಗಳಿಗೆ ಆದ್ಯತೆ ಮೇಲೆ ಸಂಚರಿಸಲು ಕೆಲವು ವಿಮಾನಗಳಿಗೆ ಅನುವು ಮಾಡಿಕೊಡುವುದಾಗಿ ತಿಳಿಸಿದೆ.