ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಗೋಪಾಡಿ ಗ್ರಾಮದ ಗೋಪಾಡಿ ಪಡುಶಾಲೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 10 ಮಂದಿಆಡುತ್ತಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ 1550 ರೂ., 4 ಹುಂಜ, 9 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಕೊರೋನಾ ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಆಡುತ್ತಿದ್ದ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.