ಉಡುಪಿ : ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ. 1,84,800 ರೂ. ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು.
ಈ ಸಂದರ್ಭ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮುಖಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ಮಾತನಾಡಿ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಹಿಂದೆ 6 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮೂಲಕ ದ.ಕ. ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಂಟ್ವಾಳ ತಾಲೂಕಿಗೂ ಆಕ್ಸಿಜನ್ ಕಾನ್ಸನ್ಟ್ರೇಟರ್ ನೀಡುವ ಯೋಜನೆ ಹಾಕಿಕೊಂಡಿದ್ದೇವೆ.
ಕಳೆದ ಹತ್ತು ತಿಂಗಳಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 1.3 ಕೋಟಿ ರೂಪಾಯಿ ವೆಚ್ಚದಲ್ಲಿ ಅನಾರೋಗ್ಯ ಪೀಡಿತರ ಚಿಕಿತ್ಸೆ, ಉಚಿತವಾಗಿ ಮನೆಗಳನ್ನು ನಿರ್ಮಿಸಲು ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಿಗೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಟ್ರಸ್ಟ್ ಮಂಜು ನಿರೇಶ್ವಾಲ್ಯ, ರಮೇಶ್ ಶೆಣೈ ಉಪಸ್ಥಿತರಿದ್ದರು.
Advertisement. Scroll to continue reading.