ಕಾಪು : ಆಟೋಗೆ ಟಿಪ್ಪರ್ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಶಿರ್ವ ರಸ್ತೆಯ ಮಲ್ಲಾರು ಗ್ರಾಮದ ಸ್ವಾಗತನಗರ ಬಳಿ ಶನಿವಾರ ನಡೆದಿದೆ. ಶಾವೂರು (40) ಮೃತಪಟ್ಟವರು.
ಶಾವೂರು ಪಕೀರಣ ಕಟ್ಟೆಗೆ ಆಗಮಿಸಿ ಹಿಂತಿರುಗುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆಟೋ ಜಖಂಗೊಂಡಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.