ವರದಿ : ದಿನೇಶ್ ರಾಯಪ್ಪನಮಠ
ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮತ್ತು ಇತರ ನಗರ, ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1 ಲಕ್ಷ ಜನಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆ, ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಹಾಗೂ ನಗರ, ಸ್ಥಳೀಯಾಡಳಿತ ಸಂಸ್ಥೆಗಳಾದ ಮಹಾ ನಗರ ಪಾಲಿಕೆ, ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಸರ್ವ ಜನಪ್ರತಿನಿಧಿಗಳಿಗೆ ಈ ಪ್ರಾಶಸ್ತ್ಯದ ಲಸಿಕೆ ನೀಡಲಿದೆ ಎಂದು ಮುಖ್ಯಮಂತ್ರಿ ಅವರು ಆದೇಶಿಸಿದ್ದಾರೆ.
ಜನರ ನಡುವೆ ಪಂಚಾಯತ್ ಕಾರ್ಯ ಪಡೆಗಳ ಮೂಲಕ ಕರೋನ ನಿಯಂತ್ರಿಸಲು ಶ್ರಮ ಪಡುತ್ತಿರುವ ಪಂಚಾಯತ್, ನಗರ, ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ಲಸಿಕೆ ನೀಡಲು ಆದೇಶ ನೀಡಿದಕ್ಕಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Advertisement. Scroll to continue reading.