ಉಡುಪಿ : ಈಗಾಗಲೇ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿರುವ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳಿರುವ 40 ಗ್ರಾಮ ಪಂಚಾ ಯತ್ ವ್ಯಾಪ್ತಿಯ ಸಾರ್ವಜನಿಕರು ಜೂ.7 ಮತ್ತು 8ರಂದು ಬೆಳಗ್ಗೆ 6ಗಂಟೆಯಿಂದ 10ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅನು ಕೂಲ ವಾಗುವಂತೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಈ ಗ್ರಾಮ ಪಂಚಾಯತ್‌ಗಳಲ್ಲಿ ಲಾಕ್‌ಡೌನ್‌ನ್ನು ಮುಂದುವರೆಸುವ ಅಥವಾ ಬೇಡವೇ ಎಂಬುದರ ಬಗ್ಗೆ ಜೂ.8ರಂದು ನಿರ್ಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement. Scroll to continue reading.