ಬೆಂಗಳೂರು : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಈ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು, ಉತ್ತರ ಬರೆದು, ವಾಟ್ಸ್ಯಾಪ್, ಇಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕು. ಇದನ್ನು ಉಪನ್ಯಾಸಕರು ಮೌಲ್ಯ ಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ಪಿಯು ಬೋರ್ಡ್ ಹೇಳಿದೆ.
Advertisement. Scroll to continue reading.