ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಚುರುಕುಗೊಂಡಿದೆ. ಜೂ.17ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಯಾದಗಿರಿ, ಚಿಕ್ಕಮಗಳೂರು, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ.
ಮುಂದುವರೆಯಲಿದೆ ಮಳೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 13 ರಿಂದ 17 ರ ತನಕ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, 50 ಕಿ.ಲೋ.ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಸೂಚಿಸಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement. Scroll to continue reading.