ಕರಾವಳಿ

ಕಾರ್ಪೋರೇಟ್ ಕುಳಗಳ ತಾಳಕ್ಕೆ ತಕ್ಕಂತೆ ಕುಣಿಯುವ ಸರಕಾರದಿಂದಾಗಿಯೇ ಉಡುಪಿ ಜಿಲ್ಲೆಗೆ ಇನ್ನೂ ಒಲಿಯದ ಸರ್ಕಾರಿ ವೈದ್ಯಕೀಯ ಕಾಲೇಜು: ಮಸೂದ್ ಮನ್ನಾ

0

ಉಡುಪಿ : ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಜನರ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡ ಸ್ಥಾಪನೆಗೊಂಡಿಲ್ಲ. ಜಿಲ್ಲೆಯ ಬಡ ವಿದ್ಯಾರ್ಥಿಗಳು ಇಲ್ಲಿಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುವುದು ಅಸಾಧ್ಯದ ಮಾತು. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಕಾರಣ ಹಲವು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ನೇರ ಹೊಣೆ ಸರ್ಕಾರವೇ ಆಗಿರುತ್ತದೆ ಎಂದು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಫೆಬ್ರವರಿ 26 ರಂದು ಜಿಲ್ಲಾಧಿಕಾರಿಯ ಮುಖಾಂತರ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರ ಕಿಂಚಿತ್ತು ಕಾಳಜಿ ತೋರಿಸದೆ ಇರುವ ಕಾರಣ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ಈ ಹೋರಾಟದ ಮುಂದುವರಿದ ಭಾಗವಾಗಿ ಇಲ್ಲಿ ಇರುವಂತಹ ಪ್ರಗತಿಪರ ಚಿಂತಕರನ್ನು, ವಿದ್ಯಾರ್ಥಿ ಮತ್ತು ಸಾಮಾಜಿಕ ಸಂಘಟನೆಗಳನ್ನು ಒಟ್ಟು ಗೂಡಿಸಿ ಒಂದು ಆಂದೋಲನ ರೂಪಿಸಲು ಎಲ್ಲಾ ಸಿದ್ಧತೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com