ಕಾಪು: ಚಂಡಮಾರುತದಿಂದ ಹಾನಿಗೀಡಾದ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ
Published
0
ಕಾಪು: ಕಾಪು ತಾಲೂಕು ವ್ಯಾಪ್ತಿಯಲ್ಲಿ ‘ತೌಖ್ತೆ’ ಚಂಡಮಾರುತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಗೃಹ ಇಲಾಖೆ ಅಧಿಕಾರಿ ಸುಶೀಲ್ ಪಾಲ್ ನೇತೃತ್ವದ ತಂಡ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇತ್ತೀಚೆಗೆ ಚಂಡಮಾರುತ ಪರಿಣಾಮ ಕಾಪು ಕೈಪುಂಜಾಲು, ಕಾಪು ಬೀಚ್, ಪಡುಬಿದ್ರಿ ಬೀಚ್ ಪ್ರದೇಶಕ್ಕೆ ಕೇಂದ್ರ ತಂಡದೊಂದಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆಗಮಿಸಿ ಪರಿಶೀಲನೆ ನಡೆಸಿದರು.
Advertisement. Scroll to continue reading.
ಈ ಸಂದರ್ಭ ಜಿಲ್ಲಾಧಿಕಾರಿ ಮಾತನಾಡಿ, ಹಾನಿಗೊಳಗಾದ ಪ್ರದೇಶ ವೀಕ್ಷಿಸಲು ಕೇಂದ್ರದಿಂದ ತಂಡ ಆಗಮಿಸಿದೆ. ಶಿರೂರಿನಿಂದ ಪಡುಬಿದ್ರಿವರೆಗೆ ಪರಿಶೀಲನೆ ನಡೆಯಲಿದೆ. ಹಾನಿಗೊಳಗಾದ ಪ್ರದೇಶಗಳ ಸಮಗ್ರ ಮಾಹಿತಿ ಸಂಗ್ರಹಿಸಿ ತಂಡ ಕೇಂದ್ರಕ್ಕೆ ವರದಿ ನೀಡಲಿದೆ ಎಂದರು. ಕೇಂದ್ರ ಗೃಹ ಇಲಾಖೆ ಅಧಿಕಾರಿ ಸುಶೀಲ್ ಪಾಲ್, ಕಾಪು ತಹಸೀಲ್ದಾರ್ ಪ್ರತಿಭಾ ಆರ್., ಎಸಿ ಕೆ. ರಾಜು, ಎಎಸ್ ಪಿ ಕುಮಾರಚಂದ್ರ, ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ, ಯಶಸ್ಸು ಎನ್ನುವುದು ರಾತ್ರೋ ರಾತ್ರಿ...