ಉಡುಪಿ : ಉಡುಪಿ ಜಿಲ್ಲೆ ಸೇರಿದಂತೆ ಇನ್ನೂ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಲಿಕೆ ಮಾಡಿ ಘೋಷಣೆ ಮಾಡಲಿದೆ. ಈ ಹಿಂದೆ ಪಾಸಿಟಿವಿಟಿ ರೇಟ್ 5% ಕ್ಕಿಂತ ಕಡಿಮೆ ಇರುವ 13 ಜಿಲ್ಲೆಗಳಿಗಷ್ಟೆ ಲಾಕ್ ಡೌನ್ ಸಡಿಲಿಕೆ ಮಾಡಲಾಗಿತ್ತು. ಉಡುಪಿ ಜಿಲ್ಲೆಯಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಬೇಕೆಂಬ ಆಗ್ರಹ ಕೇಳಿಬಂದಿತ್ತು. ಇದೀಗ ಉಡುಪಿ, ಶಿವಮೊಗ್ಗ, ಬೆಂಗಳೂರು ಗ್ರಾ., ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಿಗೆ ಲಾಕ್ ಡೌನ್ ಸಡಿಲಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಸಂಜೆ 5 ಗಂಟೆಯವರೆಗೆ ಕೆಲವೊಂದು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಜು. 5 ರ ವರೆಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ.