ಕರಾವಳಿ

ಉಡುಪಿ: ಬಸ್ ನಲ್ಲಿ ಶೇ.50ರಷ್ಟು ಆಸನ ಸಾಮರ್ಥ್ಯಕ್ಕೆ ಮಾತ್ರ ಅವಕಾಶ; ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ: ಡಿಸಿ ಜಗದೀಶ್ ಆದೇಶ; ಜಿಲ್ಲೆಯಲ್ಲಿ ಏನಿರಲಿದೆ? ಏನಿಲ್ಲ?

0
FacebookTwitterEmailWhatsAppShare

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಕಾಲ ಕಾಲಕ್ಕೆ ಅವಶ್ಯಕ ಕ್ರಮ ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಕೋವಿಡ್ ಪ್ರಕರಣಗಳ ದರ ಗಣನೀಯವಾಗಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 5 ರಷ್ಟು ಇದೆ. ಇದೀಗ ಜಿಲ್ಲೆಯ ಪ್ರಸ್ತುತ ವಿದ್ಯುಮಾನಗಳು ಹಾಗೂ ಸರ್ಕಾರದ ಆದೇಶದ ಅನ್ವಯ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಜಿ.ಜಗದೀಶ್ ಹೊಸ ಮಾರ್ಗಸೂಚಿ ಹೊರಡಿಸಿ ಆದೇಶಿಸಿದ್ದಾರೆ.

ಏನಿರಲಿದೆ ? ಏನಿಲ್ಲ?
ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯ 50% ರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ, ಬಸ್ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿಭರ್ಂಧಿಸಲಾಗಿದೆ.
ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ.ಆದಾಗ್ಯೂ ಉಡುಪು(Garment)) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮಥ್ರ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.
ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ( ( Essential /Non – Essential) ಪ್ರತಿ ದಿನ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು , ವಾಣಿಜ್ಯ ಸಂಕೀರ್ಣ, ಮಾಲ್ ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ.ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್ ನಿರ್ವಹಣೆಗಾಗಿರುವ ರಾಷ್ಟೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲಾ ವಸ್ತುಗಳ 24*7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಎಲ್ಲಾ ಅಂಗಡಿಗಳಲ್ಲಿ ಮಾಲಿಕರು /ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್ ಧರಿಸುವದು ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಮಾರ್ಕುಗಳನ್ನು ಹಾಕುವುದು ಕಡ್ಡಾಯವಾಗಿದೆ.ಯಾವುದೇ ಅಂಗಡಿಯಲ್ಲಿ ಜನ ಜಂಗುಳಿ ಇರತಕ್ಕದ್ದಲ್ಲ. ತಪ್ಪಿದ್ದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ಕೋವಿಡ್ ಮುಗಿಯುವ ತನಕ ಅಮಾನತ್ತಿನಲ್ಲಿಡಲಾಗುವುದು)

ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ  ಶೇ. 50 ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮಥ್ರ್ಯದೊಂದಿಗೆ ಲಾಡ್ಜ್ ಗಳು ಮತ್ತು ರೆಸಾರ್ಟ್ ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SಔP) ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು)
ಚಲನಚಿತ್ರ/ ಟಿ. ವಿ ಧಾರವಾಹಿಗಳಿಗೆ ಸಂಬಂಧಿಸಿದಂತೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ( ಅನುಮತಿಸಿದೆ.ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು / ಸಂಸ್ಥೆಗಳಿಗೆ ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕೋವಿಡ್ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ  ಅನುಸರಿಸುವ ಷರತ್ತುಗಳೊಂದಿಗೆ ಅನುಮತಿಸಿದೆ.

ವಾಕಿಂಗ್ ಮತ್ತು ಜಾಗಿಂಗ್ ಗಾಗಿ  ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಉದ್ಯಾನವನಗಳನ್ನು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ.

ಶೇ. 50 ಸಾಮಥ್ರ್ಯದೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು  ಅನುಸರಿಸುವ ಷರತ್ತುಗಳೊಂದಿಗೆ ಜಿಮ್ ಗಳಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.  

ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ. 

ಕೋವಿಡ್ ಸಮುಚಿತ ವರ್ತನೆಯನ್ನು)ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸುವ ಷರತ್ತುಗಳೊಂದಿಗೆ ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.( ಒಳಾಂಗಣ ಕ್ರೀಡೆಗಳಿಗೆ ಅವಕಾಶ ಇರುವುದಿಲ್ಲ )

Advertisement. Scroll to continue reading.

ಕೋವಿಡ್ ಸಮುಚಿತ ವರ್ತನೆಯನ್ನುಅನುಸರಿಸುವ ಷರತ್ತುಗಳೊಂದಿಗೆ ಎಲ್ಲ ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಸಿಬ್ಬಂದಿಯ ಶೇ. 50 ರ ಸಾಮಥ್ರ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದಾಗ್ಯೂ, ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸುವುದು.

ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಲಾಗಿದೆ.



ಮದುವೆಗಳು-ಶವಸಂಸ್ಕಾರ :

 ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ  ಕುಟುಂಬದ ಸದಸ್ಯರು  /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು  ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.

ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.   ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‍ಗಳನ್ನು ನೀಡಬೇಕು.  
ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ. 
ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಸಮುಚಿತ ವರ್ತನೆಯನ್ನು   ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‍ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು. 

ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು  ನಿರ್ವಹಿಸಲು ಅನುಮತಿಸಿದೆ.

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ


ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

Advertisement. Scroll to continue reading.

ಜಿಲ್ಲೆಯಾದ್ಯಾಂತ ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯ ವರೆಗೆ ಕಟ್ಟುನಿಟ್ಟಿನ ವಾರಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

       ಮೇಲಿನ  ಆದೇಶಗಳನ್ನು  ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು,Disaster Management Act  2005 , Karnataka Epidemic Diseases act 2020  ಮತ್ತು  IPC ಸೆಕ್ಷನ್ 188  ಮತ್ತು  IPಅ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಡಿಸಿ ಆದೇಶಿಸಿದ್ದಾರೆ.

Click to comment

You May Also Like

Uncategorized

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಲಾಯಿತು. ಸಂತ ಮೇರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಹೆರಾಲ್ಡ್ ಮೊನೀಸ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲೇ ಭವಿಷ್ಯದ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com