ಮಂಗಳೂರು : ಬುಧವಾರದಿಂದ ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕೋವಿಡ್ ನಿಯಮಾವಳಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ವ್ಯವಹಾರ ನಿರ್ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ವ್ಯಾಪಾರಸ್ಥರು ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ದೂರಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಲಾಕ್ ಡೌನ್ ಸಡಿಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7017 ಸಕ್ರಿಯವಾಗಿದೆ. ನಿನ್ನೆ 542 ಪ್ರಕರಣ ದಾಖಲಾಗಿದೆ. ಕೊರೋನಾ ಮರಣ ಪ್ರಮಾಣ ಹೆಚ್ಚಿದ್ದು, ನಿನ್ನೆ 14 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
Advertisement. Scroll to continue reading.