ಬ್ರಹ್ಮಾವರ : ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಕ್ಲಬ್ ಆವರಣದಲ್ಲಿ ನಡೆಯಿತು. ಅನಿವಾಸಿ ಭಾರತಿ ಹಾಗೂ ಉದ್ಯಮಿ ಕೆಂಜೂರು ಶಶಿಧರ ಶೆಟ್ಟಿ ಬಹರೈನ್ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಎಲ್ಲ ಜನರು ತಮ್ಮ ಮನೆಯ ಆವರಣಗಳಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಪರಿಸರ ಬೆಳೆಸಲು ಕರೆ ಕೊಟ್ಟರು.
ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ.ಚಂದ್ರಶೇಖರ ಹೆಗ್ಡೆ ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇನ್ನಷ್ಟು ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದರು.
100ಕ್ಕೂ ಹೆಚ್ಚು ಗಿಡಗಳನ್ನು ಕ್ಲಬ್ ನ ಆವರಣದಲ್ಲಿ ನೆಡಲಾಯಿತು. ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ, ಸದಸ್ಯರಾದ ಜೇಮ್ಸ್ ಒಲಿವೆಯಿರ, ಜೋಸೆಫ್ ಸುವರೆಸ್, ಸುದೇಶ್ ಹೆಗ್ಡೆ, ಪ್ರಮೋದ್ ಶೆಟ್ಟಿ, ಪ್ರಸನ್ನ ಶೆಟ್ಟಿ, ವಿವೇಕ್ ಕರ್ನೇಲಿಯೋ ಮೊದಲಾದವರು ಉಪಸ್ಥಿತರಿದ್ದರು.
Advertisement. Scroll to continue reading.