ಕನ್ನಡದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಅವರ ಪುತ್ರನ ಕಾರು ಚಲಿಸುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರು – ಹೈದ್ರಾಬಾದ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಜಗ್ಗೇಶ್ ಪುತ್ರ ಯತಿರಾಜ್ ಕಾರು ಚಲಾಯಿಸುತ್ತಿದ್ದ ವೇಳೆ ಆಯಾ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಎದುರು ಭಾಗ ಸಂಪೂರ್ಣ ನುಜ್ಜು ಗುಜ್ಜಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಯತಿರಾಜ್ ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ನಟ ಜಗ್ಗೇಶ್, ಕೊರೋನ ಬಂದಾಗಿನಿಂದ ಹೊರ ಹೋಗಿಲ್ಲಾ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ, ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರು to ಚಿಕ್ಕಬಳ್ಳಾಪುರ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆಬಿದ್ದಿದೆ!ರಾಯರದಯೇ ಹಾಗು ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಇಲ್ಲ! ಎಂದು ಬರೆದಿದ್ದಾರೆ.
Advertisement. Scroll to continue reading.