ಬೆಂಗಳೂರು : ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ(59) ಇಂದು ನಿಧನರಾಗಿದ್ದಾರೆ. ಏಳು ದಿನಗಳ ಹಿಂದೆ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡುವ ಬಗ್ಗೆ ಕುಟುಂಬ ನಿರ್ಧರಿಸಿದೆ ಎಂದು ತಿಳಿದುಬಂದಿದೆ.