ಕರಾವಳಿ

ಎಲ್ಲೂರು – ಅದಮಾರು : ಸ್ವಹಾಯ ಗುಂಪುಗಳ ಸದಸ್ಯರಿಗೆ ಲಾಭಾಂಶ ವಿತರಣೆಗೆ ಚಾಲನೆ

0

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ವತಿಯಿಂದ ಪಡುಬಿದ್ರಿ ವಲಯದ ಎಲ್ಲೂರು – ಅದಮಾರು ಕಾರ್ಯಕ್ಷೇತ್ರ ವ್ಯಾಪ್ತಿಯ 80 ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ ಈ ಬಾರಿ 27 ಲಕ್ಷ ರೂ. ಲಾಭಾಂಶ ವಿತರಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಪಡುಬಿದ್ರಿ ವಲಯ ಮೇಲ್ವಚಾರಕ ರತ್ನಾಕರ ಕೊಠಾರಿ ಹೇಳಿದರು.

ಜು.2 ರಂದು ಎಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಮತ್ತು ಅದಮಾರು ಸರ್ವೋದಯ ಸಭಾಭವನದಲ್ಲಿ ಆಯೋಜಿಸಲಾದ ಎಲ್ಲೂರು ಗ್ರಾ. ಪಂ. ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಗುಂಪುಗಳ ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಭಟ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಡೆಸುತ್ತಿರುವ ಸೇವಾ ಕಾರ್ಯಕ್ರಮಗಳು, ಮಹಿಳೆಯರ ಅಭಿವೃದ್ಧಿಗಾಗಿ ಕೈಗೊಳ್ಳುತ್ತಿರುವ ಆರ್ಥಿಕ ಚಟುವಟಿಕೆಗಳನ್ನು ಶ್ಲಾಘಿಸಿದರು. ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು ಶುಭಾಶಂಸನೆಗೈದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲೂರು ಒಕ್ಕೂಟದ ಅಧ್ಯಕ್ಷೆ ಮಾಲತಿ, ಎಲ್ಲೂರು ಒಕ್ಕೂಟದ ಸೇವಾ ಪ್ರತಿನಿಧಿ ಉಷಾ ದಯಾನಂದ ಉಪಸ್ಥಿತರಿದ್ದರು

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com