Uncategorized

ಮಿಥಾಲಿ ರಾಜ್ ಅಮೋಘ ಆಟ; ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಜಯ

0

ವೋರ್ಸೆಸ್ಟರ್: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ.

ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಇಂಗ್ಲೆಂಡ್ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 219 ರನ್ ಗಳಿಗೆ ಆಲೌಟ್ ಆಯಿತು. ನಂತರ ಟೀ ಇಂಡಿಯಾಗೆ ಓವರ್ ಕಡಿತಗೊಳಿಸಿ 47 ಓವರ್ ಗಳಲ್ಲಿ 220 ರನ್ ಗೆಲುವಿನ ಗುರಿ ನೀಡಲಾಯಿತು

ಇಂಗ್ಲೆಂಡ್ ನೀಡಿದ್ದ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ಅಜೇಯ 75 ರನ್ ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟು ಭಾರತವು ಸೋಲಿನ ದವಡೆಯಿಂದ ತಪ್ಪಿಸಿದ್ದಾರೆ. ಇನ್ನು ಟೀಂ ಇಂಡಿಯಾ ಪರ ಶಫಾಲಿ ವರ್ಮಾ 19, ಸ್ಮೃತಿ ಮಂದಾನ 49 ಹಾಗೂ ನೇಹ ರಾಣಾ 24 ರನ್ ಗಳಿಸಿ ಭಾರತದ ಗೆಲುವಿಗೆ ಪಾತ್ರರಾಗಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com