ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯನ್ನು ಲಾಕ್ಡೌನ್ ಮುಂದುವರಿಸುದಾಗಿ ಘೋಷಣೆ ಮಾಡಲಾಗಿದೆ, ಜು.19ರವರೆಗೆ ಪರಿಷ್ಕೃತ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಸನ ಜಿಲ್ಲೆಗೂ ಜು.12 ರ ವರೆಗೆ ಅನ್ ಲಾಕ್ ಭಾಗ್ಯವಿಲ್ಲ.
ಕರ್ನಾಟಕ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಬಹುತೇಕ ಆನ್ ಲಾಕ್ ಎಂದು ಘೋಷಣೆ ಮಾಡಲಾಗಿದೆ. ಆದರೆ ಕೊಡಗು, ಹಾಸನ ಜಿಲ್ಲಾಡಳಿತ ಆನ್ ಲಾಕ್ ಮಾಡದೇ ಇರಲು ತೀರ್ಮಾನಿಸಿದೆ.
ಕೊಡಗು ಜಿಲ್ಲೆಯಲ್ಲಿ ಅಗತ್ಯ ವಸ್ತು ಖರೀದಿ ಅವಧಿಯನ್ನು ಸೋಮವಾರದಿಂದ ಶುಕ್ರವಾರದವರೆಗೆ ವಿಸ್ತರಿಸಲಾಗಿದ್ದು, ಬೆಳಗ್ಗೆ 6ರಿಂದ ಮಧ್ಯನ್ನ 2 ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಇದ್ದು ಹೋಟೆಲ್, ಬಾರ್ ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶವಿರುತ್ತದೆ. ಪ್ರವಾಸೋದ್ಯಮ ಚಟುವಟಿಕೆಗಳಿಗೂ ನಿರ್ಬಂಧ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಜುಲೈ 12 ರವರೆಗೂ ಲಾಕ್ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ವಾರದಲ್ಲಿ 3 ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಖರೀದಿಗೆ ಅವಕಾಶ ಕೊಡಲಾಗಿದೆ.
Advertisement. Scroll to continue reading.
ಉಳಿದಂತೆ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಅನ್ವಯವಾಗಲಿದೆ. ಧಾರ್ಮಿಕ ಕೇಂದ್ರ ತೆರೆಯದಿರಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ಮದುವೆಗಳಲ್ಲಿ 40 ಜನ ಮಾತ್ರ ಪಾಲ್ಗೊಳ್ಳಲು ಅವಕಾಶ ಕೊಡಲಾಗಿದೆ.