ಕಾಪು: ಸುಮಾರು 32 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಬಾಲಾಲಯದಲ್ಲಿನ ಶ್ರೀ ಮಹಾಲಕ್ಷಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ಅವರು ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ಅವರಿಗೆ ಪ್ರಸಾದ ವಿತರಿಸಿದರು. ದೇವಳದ ಆಡಳಿತ ಮಂಡಳಿಯ ವತಿಯಿಂದ ಡಿಕೆ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ,ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಪ್ರಮುಖರಾದ ಐವನ್ ಡಿಸೋಜಾ, ಮಹಮ್ಮದ್ ನಲಪಾಡ್,ಅಶೋಕ್ ಕುಮಾರ್ ಕೊಡವೂರು, ದೇವಿ ಪ್ರಸಾದ್ ಶೆಟ್ಟಿ,
ದೀಪಕ್ ಇನ್ನ, ನವೀನ್ ಚಂದ್ರ ಸುವರ್ಣ, ನವೀನ್ ಚಂದ್ರ ಜೆ ಶೆಟ್ಟಿ, ರಮೀಜ್ ಹುಸೇನ್, ನವೀನ್ ಎನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Advertisement. Scroll to continue reading.