ಕರ್ನಾಟಕ ಸೇರಿ ಆರು ರಾಜ್ಯದ ಮುಖ್ಯ ಮಂತ್ರಿ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಿದ್ದು , ಅನ್ಲಾಕ್ ಬಳಿಕ ಜನರಲ್ಲಿ ಬೇಜವಾಬ್ದಾರಿತನ ಹೆಚ್ಚಾಗಿರುವ ಕುರಿತು ಮೋದಿಯವರು ಆತಂಕ ವ್ಯಕ್ತಪಡಿಸಿದ್ದು, ಕೊರೊನಾ ಹೆಚ್ಚುತ್ತಿರುವ ಕಡೆ ತಕ್ಷಣ ಕ್ರಮ ತೆಗೆದುಕೊಳ್ಳಿ, ಮೈಕ್ರೊ ಕಂಟೇನ್ ಮೆಂಟ್ ಜೋನ್ ಗಳ ಬಗ್ಗೆ ಎಚ್ಚರವಹಿಸಿ. ಕೋವಿಡ್ ನಿಯಂತ್ರಣಕ್ಕೆ 4ಟಿ ಸೂತ್ರ ನೀಡಲಾಗಿದ್ದು, ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್, ಟೀಕಾ ಈ ಸೂತ್ರಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ.
6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೊರೊನಾ ಲಸಿಕೆ, ಮೂರನೇ ಅಲೆ ಮುನ್ನೆಚ್ಚರಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕ,ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಕೇರಳದ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಆಯಾ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ.
ಜುಲೈ 13 ರಂದು ಪ್ರಧಾನಿ ಮೋದಿ ಅಸ್ಸಾಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ, ಮಿಜೋರಾಂನ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು.
ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಹೊಸ ತಳಿಯ ಆತಂಕ
ಕೊರೋನಾ ನಿಯಂತ್ರಿಸದಿದ್ದರೆ, ಹೊಸ ರೂಪಾಂತರಿ ವೈರಸ್ ಅಪಾಯ ಹೆಚ್ಚಲಿದೆ ಎಂದು ತಜ್ಞರು ಹೇಳಿರುವುದಾಗಿ ಎಂದು ಮೋದಿ ಹೇಳಿದರು. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದೆ ಇದು ಆತಂಕದ ವಿಷಯ.
Advertisement. Scroll to continue reading.
ಕಳೆದ ವಾರ ಸುಮಾರು 80% ರಷ್ಟು ಹೊಸ ಪ್ರಕರಣಗಳು ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ, ಮಹಾರಾಷ್ಟ್ರದಿಂದಲೇ ಬಂದಿವೆ ಎಂದೂ ಈ ಸಭೆಯಲ್ಲಿ ಉಲ್ಲೇಖಿಸಿದ್ದಾರೆ.
ಚಿಕಿತ್ಸೆಗಾಗಿ ಜನರು ಅಲೆಯದಂತೆ ಎಚ್ಚರ ವಹಿಸಿ:
ಕೊರೋನಾ ಹಾಗೂ ಲಭ್ಯವಿರುವ ವ್ಯವಸ್ಥೆ ಬಗ್ಗೆ ಜನರಿಗೆ ಹೆಚ್ಚಿನ ಅಗತ್ಯ ಮಾಹಿತಿ ನೀಡಿ, ಚಿಕಿತ್ಸೆಗಾಗಿ ಜನರು ಅಲೆಯದಂತೆ ಎಚ್ಚರ ವಹಿಸುವಂತೆಯೂ ತಿಳಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಶ್ರಮ ವಹಿಸಲು ಆದೇಶಿಸಿದ್ದಾರೆ.
Advertisement. Scroll to continue reading.