ಕರಾವಳಿ

ಉಡುಪಿ : ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಶಾಸಕ ರಘುಪತಿ ಭಟ್

0

ಉಡುಪಿ : ಮಳೆಗಾಲದ ಸಂದರ್ಭದಲ್ಲಿ ಮನೆಯ ಪರಿಸರದಲ್ಲಿ ಕಲ್ಮಶವಾಗಿರುವ ನೀರು ಶೇಖರಣೆಗೊಂಡು ಮಲೇರಿಯಾ, ಡೆಂಗ್ಯೂ, ಚಿಕನ್‍ಗೂನ್ಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಅವರು ಇಂದು ಅಂಬಲಪಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಗತಿ ಸೌಧದಲ್ಲಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಂಬಲಪಾಡಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ, ಮಲೇರಿಯಾ ಹಾಗೂ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೋವಿಡ್ ಸಂಕಷ್ಟದ ನಡುವೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಶೇಖರಣೆ ಆಗದಂತೆ ನೋಡಿಕೊಳ್ಳಬೇಕು. ಹೆಚ್ಚು ದಿನಗಳ ಕಾಲ ನೀರನ್ನು ಶೇಖರಿಸಿಡುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ನಗರಪ್ರದೇಶದಲ್ಲಿ ನೀರು ನಿಲ್ಲುವ ಜಾಗದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಹಡಿಲು ಭೂಮಿ ಕೃಷಿ ಯೋಜನೆಯನ್ನು ಕೈಗೊಂಡಾಗ, ಗದ್ದೆಗಳಲ್ಲಿ ಹೆಚ್ಚು ನೀರು ಶೇಖರಣೆಯಾಗುವ ಜಾಗಗಳಲ್ಲಿ, ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಿದ್ದು, ಈ ರೀತಿ ಕಾರ್ಯಗಳನ್ನು ಕೈಗೊಂಡಾಗ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದರು. ಜನಸಂಖ್ಯೆ ಎಂಬುದು ಒಂದು ಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದ ಅವರು, ಒಂದು ಬೇಕು ಎರಡು ಸಾಕು ಎಂಬ ಘೋಷಣೆಯನ್ನು ಪಾಲಿಸಿದರೆ ಜನಸಂಖ್ಯೆ ಏರಿಕೆಯನ್ನು ಕಡಿಮೆಗೊಳಿಸಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಜನಸಂಖ್ಯೆ ಏರಿಕೆಯ ಜೊತೆ ಜೊತೆಗೆ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬಡತನ, ಅರ್ಥಿಕತೆ ಹಾಗೂ ಶಿಕ್ಷಣಕ್ಕೆ ಎದುರಾಗುವ ಕಷ್ಟಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದರು.
ನಗರ ಸಭಾ ಸದಸ್ಯ ಹರೀಶ್ ಶೆಟ್ಟಿ ಜನಸಂಖ್ಯೆ ದಿನಾಚರಣೆ, ಮಲೇರಿಯಾ ಹಾಗೂ ಡೆಂಗ್ಯೂ ಮಾಸಾಚರಣೆಯ ಕರಪತ್ರ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾವiರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್ ಉಪಾಧ್ಯಾಯ, ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com