ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಪ್ರಗತಿ ಪರಿಶೀಲಿಸಿ ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘಗಳು ಅನುಸರಿಸುತ್ತಿರುವ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ, ಕೋಟ ಸಹಕಾರಿ ಸಂಘದ ವಿವಿಧ ಶಾಖೆಗಳ ಬಗ್ಗೆ ಮಾಹಿತಿ ಪಡೆದು ಸಾಲ ವಸೂಲಾತಿ ಕ್ರಮಗಳ ಬಗ್ಗೆ ತಮ್ಮ ಬ್ಯಾಂಕ್ ಅಭಿವೃದ್ಧಿ ಹೊಂದುತ್ತಿರುವ ಕಾರ್ಯವೈಖರಿಗೆ ಶ್ಲಾಘಿಸಿದರು. ಸಹಕಾರಿ ಸಂಘಗಳ ಚುನಾವಣಾ ಕಟ್ಟುಪಾಡುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರನ್ನು ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಗೌರವಿಸಿದರು. ಸಂಘದ ನಿರ್ದೇಶಕರಾದ ಮಹೇಶ್ ಶೆಟ್ಟಿ, ಟಿ.ಮಂಜುನಾಥ ಗಿಳಿಯಾರು, ರವೀಂದ್ರ ಕಾಮತ್, ರಶ್ಮಿತಾ ನಾಯಕ್, ರಂಜೀತ್ ಕುಮಾರ್, ನಾಗರಾಜ್ ಹಂದೆ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೋಭಾ ಶೆಟ್ಟಿ, ಸಹಾಯಕ ವ್ಯವಸ್ಥಾಪಕ ಕುಮಾರ್ ಕೆ, ಶರತ್ ಕುಮಾರ್ ಶೆಟ್ಟಿ, ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement. Scroll to continue reading.