ಬೆಂಗಳೂರು : ಈಗಾಗಲೇ ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ನಡುವೆ ಇಂದಿನಿಂದ ಜುಲೈ 21ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಳವಾಗುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತಿದ್ದು
ಮುನ್ಸೂಚನೆ ಕ್ರಮವಾಗಿ ಜು 18 ರಿಂದ ಜು 21 ರವರೆಗೆ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಜೊತೆಗೆ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Advertisement. Scroll to continue reading.
ಹಾವೇರಿ,ಕೊಪ್ಪಳ,ಧಾರವಾಡ ,ಬೆಳಗಾವಿ ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಿಂದಾಗಿ ಯೆಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ.