ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರದ್ದು ಎನ್ನಲಾದ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ಶಾಸಕರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಇದೊಂದು ನಕಲಿ ಆಡಿಯೋ ಎಂದು ಆರೋಪಿಸಿ ತನಿಖೆ ನಡೆಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಗೆ ಶಾಸಕರು ವೈರಲ್ ಆದ ಆಡಿಯೋ ನಕಲಿ ಎಂದು ಆರೋಪಿಸಿ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ವೈರಲ್ ಮಾಡಿದವರು ಮತ್ತು ನಕಲಿ ಆಡಿಯೋ ಸೃಷ್ಟಿಸಿದವರ ಬಂಧನಕ್ಕೆ ಒತ್ತಾಯಿಸಿದರು.
ಈ ಸಂದರ್ಭ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಭಾಗಿಯಾಗಿದ್ದರು.
Advertisement. Scroll to continue reading.