ಕೊಲಂಬೋ : ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ರೋಚಕ 3 ವಿಕೆಟ್ ಜಯ ಗಳಿಸಿದೆ. ಬೌಲರ್‌ಗಳಾದ ದೀಪಕ್ ಚಾಹರ್ ಮತ್ತು ಭುವನೇಶ್ವರ್ ಕುಮಾರ್ ಜೊತೆಯಾಟ ತಂಡ ಗೆಲ್ಲುವಲ್ಲಿ ಸಹಕಾರಿಯಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ, 50 ಓವರ್‌ಗೆ 9 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಭಾರತ 49.1 ಓವರ್‌ಗೆ 7 ವಿಕೆಟ್ ನಷ್ಟದಲ್ಲಿ 277 ರನ್ ಗಳಿಸಿ ವಿಜಯದ ನಗೆ ಬೀರಿತು. 82 ಎಸೆತಕ್ಕೆ ಚಾಹರ್ 62 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರರಾದರು. ಭುವನೇಶ್ವರ್ 19 ರನ್ ಗಳಿಸಿ ಅಜೇಯರಾಗಿ ಉಳಿದರು.
Advertisement. Scroll to continue reading.